ಬೆಂಗಳೂರು: ಅಧಿಕಾರದ ದುರ್ಬಳಕೆ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮುಖ್ಯ ಚುನಾವಣಾಧಿಕಾರಿ ಒ ಪಿ ರಾವತ್ ಗೆ ಲಿಖಿತ ದೂರು ಸಲ್ಲಿಸಿದ್ದಾರೆ.ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿರುವ ಒಪಿ ರಾವತ್ ರನ್ನು ರಾಜ್ಯ ಚುನಾವಣಾ ಆಯೋಗ ಕಚೇರಿಗೆ ಆಗಮಿಸಿ ಭೇಟಿ ಮಾಡಿದ ದೇವೇಗೌಡ ದೂರು ನೀಡಿದ್ದಾರೆ.ನಿಗಮ ಮಂಡಳಿ ಅಧ್ಯಕ್ಷರಿಂದ ಅಧಿಕಾರ ಚಲಾವಣೆ ಮಾಡಿಸಲಾಗುತ್ತಿದೆ. ಅಧಿಕಾರಿಗಳನ್ನು