ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದರ ಕುರಿತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ನಮ್ಮ ಒಪ್ಪಿಗೆಯಿದೆ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.ಇನ್ನೊಂದೆಡೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಕೂಟ ಗೆದ್ದರೆ ರಾಹುಲ್ ಗಾಂಧಿ ಪ್ರಧಾನಿಯಾಗುವುದಕ್ಕೆ ತಮ್ಮ ಅಭ್ಯಂತರವಿಲ್ಲ