ಮೈಸೂರು: ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೆಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ತಡರಾತ್ರಿ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನದಿಂದ ಅರವಿಂದ ಆಸ್ಪತ್ರೆಯಲ್ಲಿ ಶಾಸಕ ಚಿಕ್ಕಮಾದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಶಾಸಕ ಚಿಕ್ಕಮಾದು ಪಾರ್ಥೀವ ಶರೀರವನ್ನು ಅರವಿಂದ ಆಸ್ಪತ್ರೆಯಿಂದ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಮಾಜಿ ಸಂಸದ ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೆಗೌಡ, ಸಾ.ರಾ.ಮಹೇಶ್ ಸೇರಿದಂತೆ