ಬೆಂಗಳೂರು: ಇಂದು 59 ನೇ ವರ್ಷದ ಜನ್ಮ ದಿನಕ್ಕೆ ಕಾಲಿಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಡಿನ ಜನತೆಯ ಸಮಸ್ಯೆಗಳ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ. ಈ ಬಾರಿ ಚುನಾವಣೆಯಲ್ಲಿ ಜನ ನಮ್ಮ ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ