ಬೆಂಗಳೂರು, (ಜು.30): ಮೇಕೆದಾಟು ಯೋಜನೆ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು ಎಂದು ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ. ಅಲ್ಲದೇ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ನಿರ್ಧರಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಸಾಮಾಜಿಕ ಜಾತಾಣಗಳಲ್ಲಿ ಕುಮಾರಸ್ವಾಮಿ ಬರೆದುಕೊಂಡಿರುವುದು ಈ ಕೆಳಗಿನಂತಿದೆ. ಮೇಕೆದಾಟಿನಲ್ಲಿ ಅಣೆಕಟ್ಟು