ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೃಷಿ ಕುರಿತ ಅಧ್ಯಯನಕ್ಕಾಗಿ ಇಸ್ರೇಲ್ ದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕೃಷಿ ಹಾಗೂ ಪಶು ಸಂಗೋಪನೆ ಕ್ಷೇತ್ರದಲ್ಲಿ ಸುಧಾರಿತ ತಂತ್ರಜ್ಞಾನ ಬಳಸಿ ವ್ಯಾಪಕ ಅಭಿವೃದ್ಧಿ ಹೊಂದುತ್ತಿರುವ ದೇಶ ಇಸ್ರೇಲ್. ಈ ದೇಶದ ತಂತ್ರಜ್ಞಾನದ ಬಗ್ಗೆ ಅಧ್ಯಯನ ನಡೆಸುವ ಉದ್ದೇಶದಿಂದ ಎಚ್ ಡಿಕೆ ಹಾಗೂ ಕೆಲವು ಜೆಡಿಎಸ್ ನಾಯಕರು, ರೈತರ ನಿಯೋಗ ಪ್ರಯಾಣ ಬೆಳೆಸಿದೆ.ನಿನ್ನೆ ಸಂಜೆ ವಿದೇಶಕ್ಕೆ ಹಾರಿದ ಇವರು