ಬೆಂಗಳೂರು: ಭಾನುವಾರ ಬೆಳ್ಳಂ ಬೆಳಿಗ್ಗೆಯೇ ಕಾಂಗ್ರೆಸ್ ನಾಯಕ ರೆಬಲ್ ಸ್ಟಾರ್ ಅಂಬರೀಷ್ ಮನೆಗೆ ತೆರಳಿ ಮಾತುಕತೆ ನಡೆಸಿರುವ ವಿವರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.ಮಂಡ್ಯ ಕ್ಷೇತ್ರದ ಟಿಕೆಟ್ ಸಿಕ್ಕರೂ ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಅಂಬರೀಷ್ ಜತೆಗೆ ಕುಮಾರಸ್ವಾಮಿ ನಿನ್ನೆ ಮಾತುಕತೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ತನ್ನನ್ನು ಅವಮಾನ ಮಾಡಿತ್ತು ಎಂದು ಅಂಬಿ ಅಳಲು ತೋಡಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಮಾತುಕತೆಯ ವಿವರ