ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ, ಜಾತ್ಯತೀತ ಜನತಾದಳ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ವಿರುದ್ದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು? ಎಂದು ಸಂತೋಷ್