ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರು ಮತ್ತೆ ಮದುವೆ ಮಾಡಿಕೊಂಡಿದ್ದಾರೆ. ಇದಕ್ಕೆ ರೇವಣ್ಣ ಅವರ ತಂದೆಯಾಗಿರುವ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ತಾಯಿ ಚನ್ನಮ್ಮ ಸಾಕ್ಷಿಯಾಗಿದ್ದಾರೆ. ಮದುವೆ ಎಂದ ತಕ್ಷಣ ಮತ್ತೊಂದು ಮದುವೆಯಾಗಿದ್ದಾರೆ ಎಂದು ತಿಳಿದುಕೊಳ್ಳಬೇಡಿ. 60ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ರೇವಣ್ಣ ಅವರು ಷಷ್ಠಿಪೂರ್ತಿ ಕಾರ್ಯಕ್ರಮವನ್ನು ಆಚರಣೆ ಮಾಡಿಕೊಂಡಿದ್ದು, ಆದ್ದರಿಂದ ಮತ್ತೊಮ್ಮೆ ಭವಾನಿ ರೇವಣ್ಣನವರಿಗೆ ತಾಳಿ ಕಟ್ಟುವುದರ ಮೂಲಕ ಸಂಭ್ರಮ ಹಂಚಿಕೊಂಡರು.