ಹಾಸನ: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಣದಿಂದ ಹಿಂದೆ ಸರಿಯಲು ಕಾರಣವೇನೆಂದು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹೇಳಿಕೊಂಡಿದ್ದಾರೆ.ವರುಣಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ. ಇದೇ ಕಾರಣಕ್ಕೆ ಅಲ್ಲಿ ಮೊದಲು ಸ್ಪರ್ಧಿಸುತ್ತೇನೆಂದು ಪ್ರಚಾರಕ್ಕಿಳಿದಿದ್ದ ವಿಜಯೇಂದ್ರ ನಂತರ ಕಣದಿಂದ ಹಿಂದೆ ಸರಿದಿದ್ದಾರೆ. ಆದರೆ ನಾವು ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ರೇವಣ್ಣ ಹೇಳಿಕೊಂಡಿದ್ದಾರೆ.ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ