ಭಾರತ ಜೋಡೊ ಮುಖಾಂತರ ಭಾರತವನ್ನು ಒಗ್ಗೂಡಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ. ಆದ್ರೆ ಯಾವಾಗ ಈ ದೇಶ ಛಿದ್ರ ಆಗಿದೆ ಅಂತಾ ಗೊತ್ತಿಲ್ಲ ಎಂದು ಕಾಂಗ್ರೆಸ್ ಜೋಡೋ ಯಾತ್ರೆ ವಿರುದ್ಧ ಮಾಜಿ ಸಿಎಂ H.D. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು. ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿ ಮಾತನಾಡಿದ ಅವರು, ನಮಗೆ ಬೇಕಾಗಿರೋದು ಜನರ ಬದುಕು, ನಮ್ಮ ಜನರ ಬದುಕನ್ನು ಕಟ್ಟಿಕೊಡಬೇಕು. ಕಳೆದ ಮಳೆಯ ಅನಾಹುತದಿಂದಾಗಿ ನಮ್ಮ ರೈತರಿಗೆ ಆಗಿರುವ ಅನ್ಯಾಯದ