ವಿಧಾನಸಭೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಕಾವೇರಿದ ವಾಗ್ವಾದ, ಏಕವಚನದ ಬೈದಾಟಕ್ಕೆ ಕಾರಣವಾಗಿದ್ದ ಬಿಎಂಎಸ್ ಟ್ರಸ್ಟ್ ವಿವಾದ ಸದ್ಯಕ್ಕೆ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಎಂಎಸ್ ಟ್ರಸ್ಟ್ನ ಮೂಲ ಡೀಡ್ ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ಸಚಿವ ಅಶ್ವತ್ಥ ನಾರಾಯಣಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಎಂಎಸ್ ಟ್ರಸ್ಟ್ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ