ಬೆಂಗಳೂರು: ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.