ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನ ಕಡೆಗಣಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ H.D.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ತಾಲ್ಲೂಕಿನ ಬಿಡದಿಯಲ್ಲಿ ಮಾತನಾಡಿದ ಅವರು, H.D.ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇದ್ದಿದ್ದಕ್ಕೆ JDSನಿಂದ ಟ್ವಿಟ್ ಮಾಡಿದ್ದಾರೆ. ಅದನ್ನು ನಾನು ಗಮನಿಸಿದ್ದೇನೆ. ಕಾರ್ಯಕ್ರಮಕ್ಕೆ ದೇವೇಗೌಡರನ್ನ ಕರೆದರೋ ಇಲ್ಲವೋ ಎಂಬುದನ್ನು ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ದೇವೇಗೌಡರನ್ನ ಕರೆದಿದ್ವಿ ಎಂದು BJPಯವರು ಟ್ವೀಟ್ ಮಾಡಿದ್ದಾರೆ. BJP ನಾಯಕರು ಹಾಗೂ BJP ಪಕ್ಷಕ್ಕೆ ನಾಗರಿಕತೆ ಇದೀಯಾ?