ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಹಿಂದೆ ಕಾಂಗ್ರೆಸ್, ಬಿಜೆಪಿ ಕೈವಾಡವಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಕ್ರೂಢಿಕರಿಸುವ ಯತ್ನ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂದು ಮುಸ್ಲಿಮರ ಹತ್ಯೆಗಳನ್ನು ಎರಡು ರಾಷ್ಟ್ರೀಯ ಪಕ್ಷಗಳು ರಾಜಕಾರಣಗೊಳಿಸುತ್ತಿವೆ. ವಿಚ್ಚಿದ್ರಕಾರಿ ಶಕ್ತಿಗಳಿಗೆ ಉತ್ತೇಜನ ನೀಡುತ್ತಿವೆ ಎಂದು ಕಿಡಿಕಾರಿದರು. ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಿವಾಸಿ ಪರೇಶ್ ಮೆಸ್ತಾ ಮತ್ತು ಮಂಗಳೂರಿನ