ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಪ್ರವಾಸದ ವೇಳೆ, ಉರಿಗೌಡ-ನಂಜೇಗೌಡ ದ್ವಾರ ನಿರ್ಮಿಸಿದ BJP ವಿರುದ್ಧ JDS ಶಾಸಕಾಂಗ ಪಕ್ಷದ ನಾಯಕ H.D. ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಒಕ್ಕಲಿಗ ಕುಲಕ್ಕೆ ಮಾಡಿದ ಘೋರ ಅವಮಾನ ಎಂದು ಅವರು ಕಿಡಿಕಾರಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ HDK ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ BJP.