ಈಶ್ಚರಪ್ಪ ಬದಲು ಕುಮಾರಸ್ವಾಮಿಯನ್ನು ಬಂಧಿಸಬೇಕಾ’ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಮಹಾನ್ ನಾಯಕ ಸಿದ್ದರಾಮಯ್ಯ 12 ವರ್ಷದ ಹಿಂದೆ ದಾಖಲಾಗಿದ್ದ ಪ್ರಕರಣದ ಮೂಲಕ ನನ್ನನ್ನು ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳುಹಿಸಲು ಪ್ರಯತ್ನ ಮಾಡಿದ್ದರು. ನಾನು ಚಪಲಕ್ಕೋ ಅಥವಾ ಯಾರಿಗೋ ತೊಂದರೆ ಕೊಡಲು ಮಾತನಾಡುವುದಿಲ್ಲ’ ಎಂದು ‘ಸುಳ್ಳಿನ ರಾಮಯ್ಯ’ ಹೇಳಿಕೆ ಪುನರುಚ್ಚರಿಸಿದ್ದಾರೆ. ‘ನಾನು ಕೆ. ಎಸ್.