ಬೆಳಗಾವಿ : ಯಾವುದೇ ಕಠಿಣ ಸಂದರ್ಭ ಎದುರಾದರೂ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ತಳಿಯ ಬಗ್ಗೆ ನಮ್ಮ ಸರ್ಕಾರ ಎಚ್ಚರವಹಿಸಿದೆ. ಇಡೀ ರಾಜ್ಯಾದ್ಯಂತ ತಾಲೂಕು ಆಸ್ಪತ್ರೆಗಳಲ್ಲಿ, ಆರೋಗ್ಯ ಇಲಾಖೆಗೆ ಒಳಪಡುವ ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ತಯಾರಿ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು.ರಾಜ್ಯವ್ಯಾಪಿ ಮಾರ್ಕ್ ಡೀಲ್ ಮಾಡಲಾಗುವುದು. ಯಾವುದೇ ಕಠಿಣ ಸಂದರ್ಭ ಎದುರಾದರೂ ಆರೋಗ್ಯ ಇಲಾಖೆ ಸಿದ್ಧವಾಗಿದೆ.