ಬೆಂಗಳೂರು : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳ ಅನಿಯಮಿತ ವರ್ಗಾವಣೆಗೆ ಸರ್ಕಾರವು ಬ್ರೇಕ್ ಹಾಕಿದೆ. ಈ ಮೂಲಕ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ದಕ್ಷತೆ ತರುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಈ ಮೂಲಕ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮಹತ್ತರ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಪರ