ಆಧುನಿಕ ಜೀವನ ಶೈಲಿಯಿಂದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ಖಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ನಗರದ ಪ್ರೀಡಂ ಪಾರ್ಕ್ ನಲ್ಲಿ ತಥಾಗತ್ ಹೃದಯ ಆಸ್ಪತ್ರೆ ಆಯೋಜಿಸಿದ್ದ ನನ್ನ ಹೃದಯ ನಿಮ್ಮ ಹೃದಯ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನಾವು ತಿನ್ನುವ ಆಹಾರದಲ್ಲಿಯೂ ಸಾಕಷ್ಟು ವ್ಯತ್ಯಾಸವಾಗಿರುವುದರಿಂದ ಹೃದಯ ಸಂಬಂಧಿ ಖಾಯಿಲೆ ಬರುತ್ತಿದೆ. ಪೌಷ್ಠಿಕ