ಕಳೆದ ಎರಡು ವಾರಗಳಿಂದ ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಉದ್ಯಾನನಗರಿ ಬೆಂಗಳೂರು ಸಹ ಮಳೆಯಿಂದ ತತ್ತರಿಸಿಹೋಗಿದೆ. ಈ ಮಧ್ಯೆ, ಇನ್ನೂ 2 ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದ್ದು, ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಕಂದಾಯ ಇಲಾಖೆಗೆ ಸರ್ಕಾರ ಸೂಚನೆ ನೀಡಿದೆ.