ನಿಗದಿತ ಅವಧಿಗೂ ಅಂದರೆ 6 ದಿನ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ಆವರಿಸಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಸಹಜವಾಗಿ ಜುಲೈ 8ರ ವೇಳೆಗೆ ಮುಂಗಾರು ಇಡೀ ದೇಶವನ್ನು ವ್ಯಾಪಿಸಬೇಕಿತ್ತು. ಆರು ದಿನಗಳಿಗೂ ಮುಂಚಿತವಾಗಿಯೇ ಭಾನುವಾರದಂದು ಇಡೀ ದೇಶವನ್ನು ಆವರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜಸ್ತಾನ, ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆ