ನಾಡಿನ ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿ, ತ್ರಿವೇಣಿ ಸಂಗಮ ಭಾಗಮಂಡಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಐದು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಭಾಗಮಂಡಲ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ-ಅಯ್ಯಂಗೇರಿ ವಾಹನ ಸಂಚಾರ ಕಡಿತಗೊಂಡಿದೆ. ಬೋಟ್ ಬಳಸಿ ಅಲ್ಲಿನ ನಾಗರಿಕರಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ.ಮಡಿಕೇರಿ-ಭಾಗಮಂಡಲ ಮಾರ್ಗದ ರಸ್ತೆಯಲ್ಲಿ ನೀರು ಹೆಚ್ಚಳವಾಗಿದೆ. ಭಾಗಮಂಡಲದಲ್ಲಿ ನುರಿತ ಈಜು ತಜ್ಞರು, ಗೃಹ ರಕ್ಷಕದಳದ ಸಿಬ್ಬಂದಿಗಳು ಮೊಕ್ಕಂ