ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಬೆನ್ನಲ್ಲೇ ನಗರದಲ್ಲಿ ಕಳೆದೆರಡು ದಿನಳಿಂಗ ಭಾರೀ ಮಳೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ಎಡಬಿಡದೆ ಸುರಿಯುತ್ತಿರೋ ಭಾರೀ ಮಳೆಯಿಂದ ಅಲೀಂ ನಗರದಲ್ಲಿ ಕಾಂಪೌಂಡ್ ಕುಸಿದು ಬಿದ್ದು ನಾಲ್ವರಿಗೆ ಗಾಯಗಳಾಗಿವೆ. ಸ್ಲಂ ಬೋರ್ಡ್ ಒಂದನೇ ಬ್ಲಾಕ್ ನಲ್ಲಿ ಮನೆಗಳು ಬಿರುಕು ಬಿಟ್ಟಿವೆ. ಇಲ್ಲಿನ ನಿವಾಸಿಗಳು ಕಟ್ಟಡ ಕುಸಿಯುವ ಆತಂಕದಲ್ಲಿದ್ದಾರೆ. ಇದೇ ರೀತಿ