ಕರ್ನಾಟಕದಲ್ಲಿ ಇನ್ನೇನು ಮುಂಗಾರು ಮುಗಿದಿದೆ ಎನ್ನುವಾಗಲೇ ಮತ್ತೆ ಮಳೆ ಮೋಡ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ