ಬೆಂಗಳೂರು ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಯಲಹಂಕ, ಜಕ್ಕೂರು ವ್ಯಾಪ್ತಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇನ್ನೂ, ಎರಡು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಸದ್ಯ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸುರಿದ ಮಳೆ ಪ್ರಮಾಣದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದ್ದು ಚೌಡೇಶ್ವರಿ ವಾರ್ಡ್ನಲ್ಲಿ 21.50 ಮಿಮೀ ಮಳೆಯಾಗಿದೆ. ಶನಿವಾರ ರಾತ್ರಿ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿರುವುದಾಗಿ