ಕರ್ನಾಟಕದ ಕರಾವಳಿ ಜಿಲ್ಲೆ ಹೊರತುಪಡಿಸಿದರೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕಾಗಿದೆ. ಮುಂದಿನ ನಾಲ್ಕು ದಿನ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ದಿನ ಬಿಟ್ಟು ದಿನ ಅಬ್ಬರದ ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿತ್ಯ ನಿರಂತರವಾಗಿ ಹವಾಮಾನದಲ್ಲಿ ಏರಿಳಿತಗಳು ಉಂಟಾಗುತ್ತಿವೆ. ಈ ಕಾರಣದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಟ ಮುಂದುವರಿದಿದೆ. ವಿವಿಧ ಪ್ರದೇಶಗಳಲ್ಲಿ ಒಂದು ದಿನ ಜೋರು ಮಳೆ