ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಬಂಗಾಳ ಉಪಸಾಗರ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 23ರಿಂದ 26ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.