ಮಹಾನಗರಿ ಬೆಂಗಳೂರು ಒಂದೇ ಒಂದು ಮಳೆಗೆ ತೋಯ್ದು ತೊಪ್ಪೆಯಾಗಿದೆ. ಕೋರಮಂಗಲ, ಮಡಿವಾಳ, ಈಜೀಪುರ, ವಿಲ್ಸನ್ ಗಾರ್ಡನ್, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಶಾಂತಿನಗರ, ಸಿಲ್ಕ ಬೋರ್ಡ್ ಸೇರಿದಂತೆ ನಗರದ ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಗ್ಗು ಪ್ರದೇಶದ ಮನೆಗಳು, ಕ್ವಾಟ್ರಸ್`ಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ಜನರು ಪರದಾಡುತ್ತಿದ್ದಾರೆ. ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ರಾತ್ರಿ ಇಡೀ ಜನ ನಿದ್ದೆ ಮಾಡದೇ ಕಳೆದಿದ್ದಾರೆ. ಕೆಳಮಹಡಿ ಜಲಾವೃತವಾಗಿದ್ದರಿಂದ