ಕಳೆದ ರಾತ್ರಿಯಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 6 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಧ್ಯರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್ ಮತ್ತು ಚೆಂಗಲ್ಪೇಟೆ ಜಿಲ್ಲಾಧಿಕಾರಿಗಳು ಸೋಮವಾರ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಭಾರೀ ಮಳೆ ಮತ್ತು ಮಳೆಯ ಮುನ್ಸೂಚನೆಯಿಂದಾಗಿ, ತಿರುವಳ್ಳೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿರುವಳ್ಳೂರಿನ ಜಿಲ್ಲಾಧಿಕಾರಿ ಕಚೇರಿಯ ಟಿಪ್ಪಣಿಯಲ್ಲಿ ತಿಳಿಸಲಾಗಿದೆ. ಚೆನ್ನೈ, ತಿರುವಳ್ಳೂರು, ಚೆಂಗಲ್ಪೇಟ್, ಕಾಂಚೀಪುರಂ, ರಾಣಿಪೇಟ್, ತಿರುಪತ್ತೂರ್,