ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥ: ಇನ್ನೂ 5 ದಿನಗಳ ವರ್ಷಧಾರೆಯ ಮುನ್ಸೂಚನೆ

bangalore| geetha| Last Updated: ಸೋಮವಾರ, 11 ಅಕ್ಟೋಬರ್ 2021 (20:43 IST)
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಎಲ್ಲ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ ಮುಂದಿನ 5 ದಿನಗಳ ಕಾಲ ವರುಣಾರ್ಭಟ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡುತ್ತದೆ.
 
ಬೆಂಗಳೂರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಮಳೆ ಮುಂದುವರಿದಿದೆ.ಈ ಪ್ರದೇಶದ ಜಮೀನು, ಮನೆಗಳಿಗೆ ನೀರು ನುಗ್ಗುವ ಜನರ ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಏಕರೆ ಬೆಳೆಗೆ ಹಾನಿಕಾರಕ ಎಂದು ಅಂದಾಜಿಸಲಾಗಿದೆ.
 
ಹಲವು ಜಿಲ್ಲೆಗಳಲ್ಲಿ ಸತತ ಮಳೆ:
 
ಮೈಸೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ರಾಯಚೂರು, ಹುಬ್ಬಳ್ಳಿ ಧಾರವಾಡ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
 
ಕೃಷಿ ಭೂಮಿ ಸಂಪೂರ್ಣ ಜಲಾವೃತ:
 
ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ ಪಾತ್ರಗಳಲ್ಲಿರುವ ಮತ್ತು ತಗ್ಗು ಪ್ರದೇಶದ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
 
ರಾಜಧಾನಿಯಲ್ಲಿ ಭಾರೀ ಮಳೆ:
 
ಬೆಂಗಳೂರು ಸೇರಿದಂತೆ ಭಾರೀ ಮಳೆಯಾಗುತ್ತಿರುವ ವಾಹನಗಳ ಸಂಚಾರಕ್ಕೆ ಸಾಕಷ್ಟು ಅಡಚಣೆಯುಂಟಾಗಿದೆ.


ಇದರಲ್ಲಿ ಇನ್ನಷ್ಟು ಓದಿ :