ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜೂ.16ರಿಂದ 18ರವರೆಗೆ ನಡೆಸುವ ಸಿಇಟಿ ಪರೀಕ್ಷೆಗೂ ಹಿಜಾಬ್ ಸೇರಿದಂತೆ ಕಿವಿ ಮತ್ತು ತಲೆ ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ. ನೀಟ್ ಪರೀಕ್ಷೆಗೆ ಇರುವ ಮಾರ್ಗಸೂಚಿಗಳನ್ನೇ ಅನುಸರಿಸಿ ಸಿಇಟಿ ಪರೀಕ್ಷೆ ನಡೆಸಲು ಮುಂದಾಗಿರುವ ಕೆಇಎ ಈ ಸಂಬಂಧ ಈಗಾಗಲೇ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲೇ ಪರೀಕ್ಷಾ ಕೇಂದ್ರಗಳಿಗೆ ಯಾವ ರೀತೀಯ ಉಡುಪು, ವಸ್ತುಗಳನ್ನು