ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪತನಗೊಂಡಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದ್ದು, ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇಬ್ಬರು ಪೈಲಟ್ಗಳು ಸೇರಿದಂತೆ ಐವರು ಸೇನಾ ಸಿಬ್ಬಂದಿಯನ್ನು ಹೊತ್ತ ಸುಧಾರಿತ ಲಘು ಹೆಲಿಕಾಪ್ಟರ್ ನಿಯಮಿತ ಕಾರ್ಯಾಚರಣೆಯಲ್ಲಿದ್ದಾಗ ಶುಕ್ರವಾರ ಬೆಳಗ್ಗೆ 10.43ಕ್ಕೆ ಟ್ಯೂಟಿಂಗ್ನಿಂದ ದಕ್ಷಿಣಕ್ಕೆ 25 ಕಿಮೀ ದೂರದಲ್ಲಿರುವ ಮಿಗ್ಗಿಂಗ್ ಬಳಿ ಪತನಗೊಂಡಿತು ಎಂದು ಅವರು