ಬೆಂಗಳೂರು : ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ಗೆ ಚಾಲನೆ ನೀಡಿ 2020ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಮುಂದಿನ ಪ್ಯಾರೀಸ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ