ಗದಗ: ನವಿಲು ತೀರ್ಥ ಡ್ಯಾಂ ನಿಂದ ಮಲಪ್ರಭಾ ನದಿಗೆ ಸುಮಾರು 18 ಸಾವಿರ ಕ್ಯೂಸಕ್ಸ್ ನೀರು ಹರಿಬಿಡಲಾಗಿದೆ. ಇದರಿಂದ ಗದಗ ಜಿಲ್ಲೆಯ ಒಟ್ಟು 30 ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದ್ದು, ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪುರ ಗ್ರಾಮದ ಜನರ ಗೋಳು ಇಂದು ನಿನ್ನೆಯದಲ್ಲ, ದಶಕಗಳಿಂದ ಇವರದು ಇದೇ ಸಮಸ್ಯೆ. ಮಲಪ್ರಭಾ ನದಿಗೆ ಹೊಂದಿಕೊಂಡಂತೆ ಇರುವ ಈ ಗ್ರಾಮ ಪ್ರತಿವರ್ಷ ನಡುಗಡ್ಡೆಯಾಗಿ ಬೇರೆ