ಕಾಂಗ್ರೆಸ್ ಹಾಗೂ ಜೆಡಿಎಸ್ ನ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸುಲಲಿತವಾಗಿ ಸರಕಾರ ಮುನ್ನಡೆಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಪಸ್ವರಕ್ಕೆ ಆಸ್ಪದ ನೀಡದಂತೆ ಉಭಯ ಪಕ್ಷಗಳ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರಕ್ಕೆ ಯಾವುದೇ ರೀತಿಯ ಆಪತ್ತು ಬರದಂತೆ ಸಂಭಾಳಿಸುವ ಜವಾಬ್ದಾರಿಯನ್ನು ಪ್ರಭಾವಿ ಸಚಿವರೆಂದೇ ಗುರುತಿಸಿಕೊಂಡಿರುವ ಡಿ.ಕೆ ಶಿವಕುಮಾರ್ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್