ಕರ್ನಾಟಕಕ್ಕೆ ಆಕ್ಸಿಜನ್ ಕೊಡಿ: ಕೇಂದ್ರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು| Krishnaveni K| Last Modified ಗುರುವಾರ, 6 ಮೇ 2021 (09:48 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಮಿತಿಮೀರಿರುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಕೊರತೆ ಅನುಭವಿಸುತ್ತಿರುವ ಕರ್ನಾಟಕಕ್ಕೆ ಆಕ್ಸಿಜನ್ ಒದಗಿಸಿ ಎಂದು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  
> ಪ್ರತಿ ದಿನ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಕೊವಿಡ್ ನಿಯಂತ್ರಣ ಮತ್ತು ಸಮಸ್ಯೆಗಳ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ.>   ಆಯಾ ರಾಜ್ಯದಲ್ಲಿ ಬಳಕೆಯಾಗುವ ಆಕ್ಸಿಜನ್ ಆಯಾ ರಾಜ್ಯಗಳೇ ಬಳಸಲೂ ಅವಕಾಶ ಮಾಡಿಕೊಡಬೇಕು ಎಂದೂ ಕೋರ್ಟ್ ಸೂಚನೆ ನೀಡಿದೆ. ಈ ವಿಚಾರವನ್ನು ರಾಜ್ಯ ಕೇಂದ್ರದ ಗಮನಕ್ಕೆ ತರಬೇಕು. ಅದರಂತೆ ಕೇಂದ್ರ ತಾತ್ಕಾಲಿಕವಾಗಿಯಾದರೂ ಪ್ರತಿನಿತ್ಯ 1200 ಮೆಟ್ರಿಕ್ ಟನ್ ಆಕ್ಸಿಜನ್ ಒದಗಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.ಇದರಲ್ಲಿ ಇನ್ನಷ್ಟು ಓದಿ :