ತಿಹಾರ್ ಜೈಲು ಪಾಲಾಗಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಕೊನೆಗೂ ಜಾಮೀನು ಮಂಜೂರು ಆಗಿದೆ. ಕನಕಪುರ ಬಂಡೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆ ಡಿಕೆಶಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಬೆಳಗ್ಗೆಯಷ್ಟೇ ಡಿಕೆಶಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿ ಧೈರ್ಯ ತುಂಬಿದ್ದರು. ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಗೆ ಜಾಮೀನು ಮಂಜೂರು ಮಾಡಿದ್ದು, ರಾಮನಗರ, ಕನಕಪುರದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕನಕಪುರ ಬಂಡೆಯ ಅಭಿಮಾನಿಗಳು ಸಿಹಿ