ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ.ಪಂಚಗಂಗಾ ನದಿ ನೀರಿನಿಂದ ರಾಷ್ಟ್ರೀಯ ಹೆದ್ದಾರಿ 4 ಜಲಾವೃತಗೊಂಡಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಹತ್ತಿರದಲ್ಲಿ ನಿಪ್ಪಾಣಿಯ ಯಮಗರ್ಣಿ ಬಳಿ ಹೆದ್ದಾರಿಗೆ ನೀರು ತುಂಬಿಕೊಂಡಿದೆ. ನೀರಿನಿಂದ ಹೆದ್ದಾರಿ ಆವೃತವಾಗಿದೆ.ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.ನಿತ್ಯ ಲಕ್ಷಾಂತರ ವಾಹನಗಳು ಓಡಾಡುವ ಮುಖ್ಯ ಹೆದ್ದಾರಿ ಇದಾಗಿದೆ. ಅಂತರರಾಜ್ಯ ಸರಕು ಸಾಗಣೆಯ ಪ್ರಮುಖ