ಉಡುಪಿ : ನಾಳೆಯೂ ಡ್ರಾಮಾ ಮುಂದುವರಿದರೆ ಕ್ರಿಮಿನಲ್ ಕೇಸ್, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಆಕ್ರೋಶ ಹೊರಹಾಕಿದ್ದಾರೆ. ಹಿಜಬ್ ಹೈಡ್ರಾಮಾ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಿಯಾ ರೇಶಂ ಹಿಜಬ್ ತೆಗೆದು ಹಾಲ್ ಟಿಕೆಟ್ ತೆಗೆದುಕೊಂಡಿದ್ದರು. ಹಾಲ್ ಟಿಕೆಟ್ ಪಡೆಯಲು ನಿನ್ನೆ ಸಂಜೆಯವರೆಗೆ ಅವಕಾಶ ಕೊಡಲಾಗಿತ್ತು.ಕಾಲೇಜಿನಿಂದ ಫೋನ್ ಮಾಡಿ ಅವರಿಗೆ ಹಾಲ್ ಟಿಕೆಟ್ ಬಗ್ಗೆ ಹೇಳಲಾಗಿತ್ತು. ಪೋಷಕರಿಗೂ ಕೂಡ ಹಾಲ್ ಟಿಕೆಟ್ ಪಡೆಯುವ ಬಗ್ಗೆ