ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು. ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದೀಗ ರಾಜ್ಯದಲ್ಲಿ ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು