ರಾಮನಗರ : ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಸಂಘರ್ಷ ಇಂದು 3ನೇ ದಿನಕ್ಕೆ ಕಾಲಿಟ್ಟಿದೆ.ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಇಂದು ಕನಕಪುರದಿಂದ ಬೆಳಗ್ಗೆ 9.30ಕ್ಕೆ ಮುಂದುವರಿಯಲಿದೆ. ಪಾದಯಾತ್ರೆಯು ಮಧ್ಯಾಹ್ನ 1 ಗಂಟೆಗೆ ವೀರಭದ್ರಸ್ವಾಮಿ ದೇಗುಲ ಬಳಿ ಆಗಮನವಾಗಲಿದ್ದು, ಗಾಣಾಳು ವೀರಭದ್ರಸ್ವಾಮಿ ದೇಗುಲದ ಬಳಿಗೆ ತಲುಪಲಿದೆ.ಕಾಂಗ್ರೆಸ್ ಕಾರ್ಯಕರ್ತರು ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಊಟ ಮಾಡಿ ನಂತರ ವಿಶ್ರಾಂತಿ ಪಡೆದು ಪಾದಯಾತ್ರೆ ಮೂಲಕ ಸಂಜೆ ವೇಳೆಗೆ ಚಿಕ್ಕೇನಹಳ್ಳಿ ತಲುಪಲಿದ್ದಾರೆ. ಇಂದು ರಾತ್ರಿ ಚಿಕ್ಕೇನಹಳ್ಳಿಯಲ್ಲಿ ಕಾಂಗ್ರೆಸ್