ಶಿವಮೊಗ್ಗ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಕನ್ನಡ ಸಾಹಿತಿಗಳಿಗೆ ಆದ ಅಪಮಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ.ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿತ್ತು.ಅಲ್ಲದೇ ಅನೇಕ ಪಠ್ಯಗಳನ್ನು ಕೈಬಿಡಲಾಗಿದ್ದು, ಹಿಂದೂಪರ ಧೋರಣೆಗಳನ್ನು ಪಠ್ಯದಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಲಾಗಿತ್ತು. ವಿವಾದದ