ಚಿಕ್ಕಬಳ್ಳಾಪುರ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಎರಡು ಕಡೆಗಳಲ್ಲಿ ಗುಡ್ಡ ಕುಸಿತವಾಗಿದೆ. ರಾಜ್ಯಾದ್ಯಂತ ಕಳೆದ 2 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಡೆ ಅನಾಹುತಗಳಾಗುತ್ತಿವೆ. ಅದೇ ರೀತಿ ಪ್ರವಾಸಿಗರ ನೆಚ್ಚಿನ ತಾಣವಾದ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿಯೂ ಗುಡ್ಡ ಕುಸಿತವಾಗಿದೆ. ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತ