ಗಣೇಶೋತ್ಸವ ಸಂದರ್ಭದಲ್ಲಿ ಯುವಕನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲ್ಲೂಕು ಘಟಕದ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಕೊಲೆಯಾದ ಯುವಕನಾಗಿದ್ದಾನೆ. ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬುವವರು ಕಾರ್ತಿಕ್ಗೆ ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ