ಜೆಡಿಎಸ್ ಎಜೆಂಟರಂತೆ ವರ್ತಿಸುತ್ತಾರೆ ಎಂಬ ಆರೋಪ ಹೊತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಅವರು, ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.ಹುಬ್ಬಳ್ಳಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಮುಖವಾಗಿ ಜಂತಕಲ್ ಮೈನಿಂಗ್ ಹಗರಣದ ಕುರಿತಾಗಿ ಮಾತನಾಡಿದ್ದಾರೆ. ಈ ಹಗರಣದಲ್ಲಿ ಮೂರು ಪಕ್ಷಗಳ ಜೆಸಿಬಿಗಳು ಭಾಗಿಯಾಗಿವೆ. ಇದೇ ಹಗರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜನಾರ್ದನ ರೆಡ್ಡಿ ಹಾಗೂ ಕರುಣಾಕರ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ರಾಜೀನಾಮೆ