ಹೈದ್ರಾಬಾದ್ ಕರ್ನಾಟಕ ಪ್ರದೇಶದ ಪ್ರಮುಖ ಶಿಕ್ಷಣ ಸಂಸ್ಥೆಯಾಗಿರುವ ಕಲಬುರಗಿ ನಗರದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಭೀಮಾಶಂಕರ್ ಬಿಲಗುಂದಿ ಆಯ್ಕೆಯಾಗಿದ್ದಾರೆ. ನಗರದ ಪಿಡಿಎ ಇಂಜಿನೀಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಹಾಗೂ ಹಾಲಿ ಅಧ್ಯಕ್ಷ ಬಸವರಾಜ್ ಭೀಮಳ್ಳಿ ಅವರನ್ನು ನೂರಾ ಹದಿಮೂರು ಮತಗಳ ಅಂತರದಿಂದ ಸೋಲಿಸುವ ಮೂಲಕ ಸಂಸ್ಥೆಯ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಲಗುಂದಿ ಪ್ಯಾನಲ್ ನಿಂದ ಉಪಾಧ್ಯಕ್ಷ