ವಿಧಾನಸಭೆ ಚುನಾವಣೆಯಷ್ಟೇ ಮಹತ್ವ ಪಡೆದುಕೊಂಡಿರುವ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಚುನಾವಣೆ ದಿನದಿಂದ ದಿನಕ್ಕೆ ಕಾವೆರುತ್ತಿದೆ. ಸಂಸ್ಥೆಯ ಅಧಿಕಾರ ಚುಕ್ಕಾಣಿ ಹಿಡಿಯಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಭಾರಿ ತುರುಸಿನಿಂದ ಕೂಡಿರುವ ಸಂಸ್ಥೆಯ ಅಧಿಕಾರದ ಗದ್ದುಗೆ ಯಾರಿಗೆ ಒಲಿಯಲಿದೆ ಎನ್ನೋದು ತೀವ್ರ ಕುತೂಹಲ ಮೂಡಿಸಿದೆ. ತೊಗರಿ ನಾಡು ಖ್ಯಾತಿಯ ಕಲಬುರಗಿಯ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಚುನಾವಣೆ ಚುನಾವಣೆ ಕಣ ರಂಗೇರಿದೆ. ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಮತ್ತು