ಬೆಳಗಾವಿ : ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ 3 ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ 7 ಬೋನು ಇರಿಸಿ, ಕ್ಯಾಮೆರಾ ಅಳವಡಿಸಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲೆಗಳಿಗೆ ಡಿಡಿಪಿಐ ಮೌಖಿಕ ಆದೇಶದನ್ವಯ ಬೆಳಗಾವಿ ನಗರ ಬಿಇಒ ರಜೆ