ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾವನ್ನಪ್ಪಿದ್ದಾರೆ. ಕೋಲಾರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಮನೆಯಲ್ಲಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್.ನಾಗಪ್ರಕಾಶ್ (58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕೋಲಾರದ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಶೋಭ, ಸ್ವರೂಪ್ ಹಾಗೂ ಸತ್ಯನಾರಾಯಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೋಭ ಎಂಬುವವರಿಗೆ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ದಾಖಲು